ಬೆಂಗಳೂರು: ಈಗಾಗಲೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳ 3ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು, 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರವನ್ನು ಶಾಲಾ ಹಂತದಲ್ಲಿ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.
ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ
ಇನ್ನೂ ಮಕ್ಕಳಿಗೆ ಬಹುಮಖ ಚಟುವಟಿಕೆಗಳಲ್ಲಿ ತೊಡಗಿಸುವ ನಿಟ್ಟಿನಲ್ಲಿ ಹಾಗೂ ನಾಗರೀಕ ಪ್ರಜ್ಞೆಯನ್ನು ಬೆಳೆಸುವ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು, ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯಲ್ಲಿ ತಿಳಿಸಲಾಗಿದೆ.
ಪ್ರತಿ ತಿಂಗಳ 3ನೇ ಶನಿವಾರದ ಸಂಭ್ರಮದ ಶನಿವಾರದಂದು ಜಿಲ್ಲಾ, ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಗತ್ಯ ಮಾರ್ಗದರ್ಶನವನ್ನು ನೀಡಬೇಕು. ಸಂಭ್ರಮ ಶನಿವಾರ ಆಚರಣೆಗೆ ಸಂಬಂಧಿಸಿದಂತ ಮಾಹಿತಿ ಕ್ರೂಢೀಕರಿಸಿ, ವರದಿ ಸಲ್ಲಿಸುವಂತೆ ಡಿಎಸ್‌ಇಆರ್ ಟಿ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.