ರಾಜ್ಯದಲ್ಲಿ ಸೆ.1 5 ಅಥವಾ 20ರ ನಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, 6 ದಿನ ಹಾಲು, ರಾಗಿ ಮಾಲ್ಟ್, ಬಿಸಿಯೂಟ ಸಿಗುತ್ತಿದೆ.
ವಾರದಲ್ಲಿ ಒಂದು ದಿನ ಸಿಗುತ್ತಿರುವ ಮೊಟ್ಟೆಯನ್ನು 2ದಿನ ನೀಡಲಾಗುತ್ತಿದೆ. ಅಜೀಂ ಪ್ರೇಮ್‌ಜೀ ಪ್ರತಿಷ್ಠಾನ ಜತೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ, 1,500ಕೋಟಿ ರೂ. ವೆಚ್ಚದಲ್ಲಿ 56ಲಕ್ಷ ಮಕ್ಕಳಿಗೆ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡುವ ಕಾರ್ಯ ಶುರುವಾಗಲಿದೆ ಎಂದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.