ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ

WhatsApp
Telegram
Facebook
Twitter
LinkedIn

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ.

ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.

ಅಕ್ಟೋಬ‌ರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದೆ. 2025ರ ಏಪ್ರಿಲ್ 10 ತನಕ ಶಾಲೆಗಳು ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon