ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ಹೈಲೆವೆಲ್ ಉಗ್ರರ ಕೈವಾಡ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಜತೆ ಮಾತನಾಡಿದ್ದೇನೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಇ-ಮೇಲ್ ಪತ್ರದಲ್ಲಿ ಉಲ್ಲೇಖವಾಗಿದೆ. ಧರ್ಮಾಧರಿತವಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗುತ್ತಿದೆ. ಉಗ್ರವಾದ ಅರ್ಥದಲ್ಲಿ ಇ-ಮೇಲ್ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದರು.
ಇನ್ನು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದೆ. ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗಳಿಗೆ ಮೇಲ್ ಬಂದಿದೆ ಎಂದು ತಿಳಿಸಿದ್ದಾರೆ.