ಬೆಂಗಳೂರು : ವಿಧಾನಸೌಧದಲ್ಲಿ ಇಂದು ನಡೆದ ಶಾಸಕರ ಸಮೂಹ ಫೋಟೋ ಶೂಟ್ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಏಕೆಂದರೆ ವಿಧಾನಸಭೆಯ ಅವಧಿ ಮುಗಿಯಲು ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಸ್ಪೀಕರ್ ಯು.ಟಿ. ಖಾದರ್ ಅವರು ಹಠಾತ್ ‘ಫೋಟೋ ಶೂಟ್’ ಆಯೋಜಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದೆ.
ಒಂದೆಡೆ ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಮಟ್ಟದಲ್ಲಿ ಒತ್ತಡ, ಇನ್ನೊಂದೆಡೆ ನಾಯಕತ್ವ ಬದಲಾವಣೆ ಈ ಎಲ್ಲಾ ಬೆಳವಣಿಗೆಗಳ ನಡುವೆ ನಡೆದ ಫೋಟೋ ಶೂಟ್ ಮಾತ್ರ ರಾಜೀಖಯದಲ್ಲಿ ಸಂಚಲ ಸೃಷ್ಠಿ ಆಗುತ್ತಿದೆ.
ಸಾಮಾನ್ಯವಾಗಿ ಇಂತಹ ಸಮೂಹ ಚಿತ್ರೀಕರಣವು ವಿಧಾನಸಭೆಯ ಐದು ವರ್ಷಗಳ ಅವಧಿ ಮುಗಿಯುವ ಕೊನೆಯ ಅಧಿವೇಶನದಲ್ಲಿ ನಡೆಯುತ್ತದೆ. ಆದರೆ ಈಗಲೇ ಫೋಟೋ ಶೂಟ್ ನಡೆಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ಮಾರ್ಚ್ 25, 2026ರಂದು (ಬುಧವಾರ) ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋ ಶೂಟ್ ಆಯೋಜಿಸಲಾಗಿತ್ತು.































