ಬೆಂಗಳೂರು : ಬೆಂಗಳೂರು ನಗರದ ಹೆಬ್ಬಗೋಡಿ (Hebbagodi) ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿಯ ವಿಶೇಷ ತನಿಖಾ ದಳದ (SIT) ಪೊಲೀಸರು ಗುರುವಾರ ಅರೆಸ್ಟ್ ಮಾಡಿದ ಘಟನೆ ನಡೆದಿದೆ.
ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಐಯಣ್ಣ ರೆಡ್ಡಿ ಅವರನ್ನು SIT ತನಿಖಾಧಿಕಾರಿಗಳು ವಶಕ್ಕೆ (custody) ಪಡೆದಿದ್ದಾರೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಬಳಿಕ ಷರತ್ತುಬದ್ಧ ಜಾಮೀನಿನ (Conditional bail) ಮೇಲೆ ಮುನಿರತ್ನ ಅವರು ರಿಲೀಸ್ ಆಗಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಐಯಣ್ಣ ರೆಡ್ಡಿ ಅವರು ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮುನಿರತ್ನ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಹೆಚ್ಚಿನ ವರ್ಷ ಕೆಲಸ ಮಾಡಿದ್ದರು ಎನ್ನಲಾಗಿದೆ.
ಆರೋಪಿಗಳು ಕೆಲವು ರಾಜಕಾರಣಿಗಳಿಗೆ aids ಚುಚ್ಚುಮದ್ದು ಪ್ರಯೋಗಿಸಲು ಪ್ಲ್ಯಾನ್ ಮಾಡಿದ್ದರು. ಈ ಮಾಹಿತಿ ಗೊತ್ತಿದ್ದರೂ ಇನ್‌ಸ್ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರು. ಅಲ್ಲದೇ ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು ಎಂಬ ಆರೋಪದ ಅಡಿ ಬಂಧಿಸಲಾಗಿದೆ ಎಂದು SIT ಮೂಲಗಳು ತಿಳಿಸಿವೆ.
ಇನ್ನೂ ರಾಜ್ಯ ಸರ್ಕಾರವು, ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ, ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ವಶಕ್ಕೆ ಪಡೆಯಲಾಗಿದೆ.