ಶಿವಮೊಗ್ಗ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಹಾಗೂ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.