ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯ ಕಾವು ರಂಗೇರುತ್ತಿದ್ದು ಕಾಂಗ್ರೆಸ್‌ಗೆ ಡಬಲ್ ಶಾಕ್ ಎಂಬಂತೆ ಯಾಸಿರ್ ಪಠಾಣ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ಬಂಡಾಯವೆದ್ದ ಅಜ್ಜಂಪೀರ್ ಖಾದ್ರಿ ಅವರು ಇಂದು ಪಕ್ಷೇತ್ರರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದಾರೆ. ಇದಾದ ಬಳಿಕ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್‌ಗಾಗಿ ಮಂಜುನಾಥ ಕುನ್ನೂರು ಹಾಗೂ ಅವರ ಮಗ ರಾಜು ಅವರು ಪೈಪೋಟಿ ನಡೆಸಿದ್ದರು. ಆದರೆ, ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.