ಅಂಕೋಲಾ : ಉತ್ತರಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ದೊಡ್ಡ ಅನಾಹುತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದ್ದು, ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದೆ . ಘಟನೆಯಲ್ಲಿ ಹಲವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಗುಡ್ಡ ಕುಸಿತ ರಬಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ,ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಲಾರಿ ಮತ್ತಿತರ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ . ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾಗಿ ಜರಿದ ಪರಿಣಾಮ ಗಂಗಾವಳಿ ನದಿ ಪಾತ್ರದ ಆಚೆ ದಡದ ಮನೆಯೂ ಕೊಚ್ಚಿಹೋಗಿದೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಟಿ ಕುಡಿಯುತ್ತಿದ್ದರು. ಇದೇ ವೇಳೆ ಭಾರಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಮಣ್ಣಿನಡಿ ಸಿಲುಕಿದ್ದಾರೆ. ಮಣ್ಣಿನಡಿ ಸಿಲುಕಿದವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಜಿಲ್ಲಾಡಳಿತವು ಹೆದ್ದಾರಿ ಮೇಲಿನನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭಿಸಿದೆ.