ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ಸು ಹಾನಗಲ್ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ. ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.