ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟಿçÃಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಿಗೆ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು.
ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 25ರೊಳಗೆ ಸಲ್ಲಿಸುವಂತೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಿಗಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08194-235635 ಸಂಪರ್ಕಿಸಬಹುದು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.