ನವದೆಹಲಿ :ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಜಾಮೀನು ವಿಚಾರವಾಗಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಈ ಮೂಲಕ ಭವಾನಿ ರೇವಣ್ಣ ಕೊಂಚ ನಿರಾಳರಾಗಿದ್ದಾರೆ.
ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿತ್ತು. ಜಾಮೀನಿಗೂ ತಡೆಯಾಜ್ಞೆ ನೀಡುವ ಬಗ್ಗೆ ಚರ್ಚೆಯಾಗಿತ್ತು, ಈ ವಿಚಾರವಾಗಿ ಭವಾನಿ ರೇವಣ್ಣಗೆ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂಬುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಪ್ರಕರಣದ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಕೆಲವೊಂದು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂಬುವುದಾಗಿ ಸುಪ್ರೀಂ ಹೇಳಿದೆ.