ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರದಂದು ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಹೆಚ್ ಡಿ ರೇವಣ್ಣ ವಿರುದ್ಧ ಸೆಕ್ಷನ್ 364/ಎ 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದ್ದು, ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ (ಎಸ್ ಐಟಿ) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಎಸ್ಐಟಿ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಶೋಧ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.