ಚಿತ್ರದುರ್ಗ : ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ ಹೇಳಿದರು.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಸಿದ್ದರಾಮಯ್ಯ ಭಾಷಣ ಮಾಡಿದರು.
ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ, ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ. ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಬೇಕು.
ಮಂಡಲ್ ವರದಿಯನ್ನು ಬಿಜೆಪಿ ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ ಆರ್.ಎಸ್.ಎಸ್ ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದೆಂದರು.