ಸಂಸದೆ ಮಹುವಾ ಮೊಯಿತ್ರಾ ವಿರುದ್ದ ತನಿಖೆ ನಡೆಸುವಂತೆ ಸ್ಪೀಕರ್ ಗೆ ಪತ್ರ

ಹೊಸದಿಲ್ಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.

ಅಲ್ಲದೇ ಅವರ ವಿರುದ್ಧ ತನಿಖೆ ನಡೆಸುವಂತೆ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ. ಡಿಸೆಂಬರ್ 12, 2015ರಂದು ಉದ್ಯಮಿ ಹೀರಾನಂದನಿ ಹಿತಾಸಕ್ತಿಯನ್ನು ಕಾಪಾಡಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂಸದೆ ಮಹುವಾ ಮೊಯಿತ್ರಾ ಕೇಳಿರುವ 65 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಹೀರಾನಂದನಿ ಅವರ ವ್ಯವಹಾರಿಕ ಹಿತಾಸಕ್ತಿಯನ್ನು ಕಾಪಾಡಲು ಕೇಳಲಾಗಿದೆ ಎಂದು ಅವಹೇಳಲಾಗಿದೆ ಎಂದು ಅವರು ದೂರಿದ್ದಾರೆ.

Advertisement

ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಅಮಾನತುಗೊಳಿಸಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement