ಅಶ್ಲೀಲ ವಿಡಿಯೋ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿದ್ದು, ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ತನಿಖೆ ನಡೆಸಲು ಎಸ್‌ಐಟಿ ಸಜ್ಜಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿ, ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. ಆ ಘಟನೆಗಳು ನಡೆಯಬಾರದಿತ್ತು, ನಡೆದು ಹೋಗಿದೆ. ಈ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದಾರೂ ಅವರಿಗೆ ನಮ್ಮ ಸರ್ಕಾರ ಶಿಕ್ಷೆ ನೀಡಲಿದೆ ಎಂದು ಹೇಳಿದ್ದಾರೆ. ಇನ್ನು ಸಂಸ್ರಸ್ತ ಮಹಿಳೆಯರ ವಿಡಿಯೋ, ಪೋಟೋಗಳು ವೈರಲ್ ಆಗಿದ್ದು, ಈ ಬೆಳವಣಿಗೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
“ಸಂಸದ ಪ್ರಜ್ವಲ್ ರೇವಣ್ಣ ವಿಶೇಶಕ್ಕೆ ಹೋಗುವ ಮೊದಲು ರೆಡ್ ಕಾರ್ನರ್ ನೋಟೀಸ್ ಹೊರಡಿಸಬಹುದಿತ್ತು. ಏರ್‌ಪೋರ್ಟ್‌ಗಳನ್ನು ಮ್ಯಾನೇಜ್ ಮಡ್ತಿರೋದ್ಯಾರು? ಪ್ರಶ್ನಿದರಲ್ಲದೆ, ಯಾಕೆ ಕೇಂದ್ರ ಬಿಜೆಪಿ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಬಿಜೆಪಿ ನಾಯಕರು ಯಾಕೆ ಉತ್ತರ ನೀಡುತ್ತಿಲ್ಲ,” ಎಂದು ವಾಗ್ದಾಳಿ ನಡೆಸಿದರು.