ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ: ಮಂಗಳೂರು – ಬೆಂಗಳೂರಿಗೆ ವಿಶೇಷ ರೈಲು ಸಂಚಾರ

ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ. ಕರಾವಳಿಯ ಬಹಳಷ್ಟು ಜನ ಮಂಗಳೂರು-ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದೆ. ಹೀಗಾಗಿ, ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪತ್ರದಲ್ಲಿ ಮನವಿ ಮಾಡಿದ್ದರುಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ. ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ. ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿವೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement