ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು.
ಇನ್ನು ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿ ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.
ಚುನಾವಣಾ ಅಕ್ರಮಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಇತ್ತೀಚೆಗೆ ಅಸಿಂಧುಗೊಳಿಸಿತ್ತು.