ಸಗಣಿ ರಾಶಿಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ ಹಚ್ಚಿದ ಪೊಲೀಸರು..!

WhatsApp
Telegram
Facebook
Twitter
LinkedIn

ಕಳ್ಳ ತಾನೂ ಕದ್ದ 20 ಲಕ್ಷ ರೂ. ಹಣವನ್ನು ಹಸುವಿನ ಸಗಣಿಯಲ್ಲಿ (dung) ಬಚ್ಚಿಟ್ಟಿದ್ದು, ಪೊಲೀಸರು ಹಣವನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಒಡಿಶಾದ (Odisha) ಬಾಲಾಸೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಕಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ದಾಳಿ ನಡೆಸಿದ ಹೈದರಾಬಾದ್ ಮತ್ತು ಒಡಿಶಾ ಪೊಲೀಸರ (Hyderabad and Odisha Police) ತಂಡವು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ (agricultural based company) ಕೆಲಸ ಮಾಡುತ್ತಿದ್ದ ಗೋಪಾಲ್ ಎಂಬಾತ, ತಾನೂ ಕೆಲಸ ಮಾಡುತ್ತಿದ್ದ ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದಿದ್ದ. ನಂತರ ತನ್ನ ಸಂಬಂಧಿ ರವೀಂದ್ರ ಬೆಹೆರಾ ಎಂಬುವವರಿಗೆ ಹಣ ಕೊಟ್ಟು ತನ್ನೂರಿಗೆ ಕಳುಹಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರ ತಂಡವು ಕಮರ್ದಾ ಪೊಲೀಸರೊಂದಿಗೆ ಆರೋಪಿಯ ಸಂಬಂಧಿ ರವೀಂದ್ರ ಅವರ ಮನೆ ಮೇಲೆ ದಾಳಿ ನಡೆಸಿದರು. ಈ ವೇಳೆ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ (hidden) ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon