ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಬಸವಂತ್ ಮೇಲೆ ಚಾಕುವಿನಿಂದ ಇರಿದಿದ್ದಾರೆ. ಬಸವಂತ್ ಅವರ ಎದೆ, ಭುಜ ಸೇರಿದಂತೆ ನಾಲ್ಕು ಕಡೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬಸವಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್ ಹೆಬ್ಬಾಳಕರ್ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿ ಪಡೆದಿದ್ದಾರೆ.

































