ಬೆಂಗಳೂರು: ಸಚಿವ ಡಿ.ಸುಧಾಕರ್ ವಿರುದ್ಧದ ದೌರ್ಜನ್ಯ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆ ನೀಡಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಸಚಿವ ಡಿ.ಸುಧಾಕರ್ ವಿರುದ್ದ ಸುಬ್ಬಮ್ಮ ಎಂಬುವರು ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ದೂರಿನ ಮೇರೆಗೆ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸುಧಾಕರ್ ವಿರುದ್ಧ ಕೇಸ್ ದಾಖಲಾಗಿತ್ತು.
ಇನ್ನು ಈ ಪ್ರಕರಣದ ರದ್ದು ಕೋರಿ ಸುಧಾಕರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅಕ್ಟೋಬರ್3ಕ್ಕೆ ಮುಂದೂಡಿದೆ.