ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ, ಕೋರ್ಟ್ ಇಂದು 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಈಗ ಕೇಂದ್ರ ಕಾರಾಗೃಹದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಖೈದಿ ನಂ.4567 ಆಗಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋದಲ್ಲಿ ಸಂತ್ರಸ್ತೆಯಾಗಿದ್ದಂತ ಮಹಿಳೆಯೊಬ್ಬರನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರೆ ಎಂಬುದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅವರ ಮಗ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಹೆಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ರೂ, ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.