ಸಣ್ಣ ಮತ್ತು ಅತಿ ಸಣ್ಣ ಉದ್ಯಮ ನಡೆಸುವ ಉದ್ಯಮಿಗಳಿಗೆ ಇದು ನಿಜಕ್ಕೂ ಸಿಹಿ ಸುದ್ದಿ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಕಾರ್ಪೊರೇಟ್ ಅಲ್ಲದ ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ ಪರಿಣಾಮಕಾರಿ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಯೋಜನೆಯ ಆಶಯವನ್ನು ಮತ್ತಷ್ಟು ವಿಸ್ತರಿಸಲು ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ.
ತರುಣ್ ವಿಭಾಗದಲ್ಲಿ 10 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಸಕಾಲದಲ್ಲಿ ಸಾಲವನ್ನು ಮರುಪಾವತಿ ಮಾಡಿದವರಿಗೆ ಈ ವಿಸ್ತರಿತ ಮುದ್ರಾ ಸಾಲ ಯೋಜನೆಯ ಲಾಭ ದೊರಕಲಿದೆ.
ತರುಣ್ ಪ್ಲಸ್ ವಿಭಾಗದಲ್ಲಿ 10 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳ ವರೆಗೆ ಸಾಲದ ಸೌಲಭ್ಯವನ್ನು ಬ್ಯಾಂಕ್‌ಗಳು ನೀಡಲಿವೆ. ಇದರಿಂದ ಯುವ ಉದ್ಯಮಿಗಳು ತಮ್ಮ ಉದ್ಯಮವನ್ನು ಮತ್ತಷ್ಟು ವಿಸ್ತರಿಸಲು ಅನುಕೂಲವಾಗಲಿದೆ..
2015ರ ಎಪ್ರಿಲ್ 8ರಂದು ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಯನ್ನು ಜಾರಿಗೊಳಿಸಿತ್ತು. ಸರ್ಕಾರಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಕಿರು ಹಣಕಾಸು ಸಂಸ್ಥೆಗಳು ಮುದ್ರಾ ಯೋಜನೆಯಡಿ ಸಾಲ ಸೌಲಭ್ಯವನ್ನು ನೀಡುತ್ತಿವೆ.
ಯಾವುದೇ ಆಧಾರ ಇಲ್ಲದೆ ಸಾಲ ಸೌಲಭ್ಯ ನೀಡುವ ಯೋಜನೆ ಇದಾಗಿದೆ. ಶಿಶು ವಿಭಾಗದಲ್ಲಿ 50 ಸಾವಿರ ರೂಪಾಯಿಗಳ ವರೆಗೆ ಸಾಲ ಸೌಲಭ್ಯ ದೊರೆಯಲಿದೆ.
ಕಿಶೋರ್ ವಿಭಾಗದಲ್ಲಿ 51 ಸಾವಿರ ರೂಪಾಯಿಗಳಿಂದ 5 ಲಕ್ಷ ರೂಪಾಯಿಗಳ ವರೆಗೆ ಸಾಲ ಸೌಲಭ್ಯ ದೊರೆಯಲಿದೆ.
ತರುಣ್ ವಿಭಾಗದಲ್ಲಿ 5 ಲಕ್ಷ ರೂಪಾಯಿಗಳಿಂದ 10 ಲಕ್ಷ ರೂಪಾಯಿಗಳ ವರೆಗೆ ಸಾಲ ಸೌಲಭ್ಯ ದೊರೆಯಲಿದೆ.
ಇದೀಗ ಈ ಎಲ್ಲ ವಿಭಾಗಗಳ ಸಾಲ ಸೌಲಭ್ಯದ ಮಿತಿಯನ್ನು ದುಪ್ಪಟ್ಟು ಮಾಡಲಾಗಿದೆ. ದೇಶದಾದ್ಯಂತ ಈ ಸಾಲ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳು ಈ ಸಾಲ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಕೇಂದ್ರ ಸರ್ಕಾರ ತಿಳಿಸಿದೆ.