ಬೆಳಗಾವಿ: 65 ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿರುವುದು ವಿಧಾನಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದು.ಆದರೆ ಇವರು ಸದನದಲ್ಲಿ ಚರ್ಚೆ ಮಾಡದೇ ಹೊರಗೆ ಹೋರಾಟ ಮಾಡಿದರೆ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ನಡವಳಿಕೆಯಿಂದ ಅವರ ಪಕ್ಷದಲ್ಲಿ ಒಮ್ಮತವಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದರು.
ಸರಕಾರ ಕೋಟ್ಯಂತರ ರೂ. ಖರ್ಚು ಮಾಡಿ ಸುವರ್ಣಸೌಧ ಕಟ್ಟಿಸಿರುವುದು ಉತ್ತರ ಕರ್ನಾಟಕದ ಸಮಸ್ಯೆಗಳು, ಬರ ಪರಿಸ್ಥಿತಿ ಹಾಗೂ ಸರಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು ಎಂದು. ಅದನ್ನು ಬಿಟ್ಟು ಹೊರಗೆ ಹೋರಾಟ ಮಾಡುತ್ತೇನೆ ಎಂದರೆ ಯಾರು ಕೇಳುತ್ತಾರೆ ಎಂದರು.