ಕಲಬುರಗಿ : ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿರುವ ಹೇಳಿಕೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉದಯನಿಧಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು, ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿಕೊಂಡು ವಿವಾದಕ್ಕೆ ಕಾರಣವಾಗಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹೌದು, ಕಲಬುರಗಿಯ ಪಂಡಿತ್ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸನಾತನ ಧರ್ಮವನ್ನು ಕಾಗೆಗೆ ಹೋಲಿಸಿ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಸನಾತನ ಧರ್ಮ ಅಂದ್ರೆ ಏನು ಅಂತಾ ಪ್ರಶ್ನಿಸಿದಾಗ, ಮನುಷ್ಯ ಬದಲಾಗುವುದಿಲ್ಲ ನಾನು ಎನ್ನುವುದು ಪ್ರಕೃತಿಗೆ ವಿರುದ್ಧ ನಾನೇ ಶ್ರೇಷ್ಠ ಅಂತಾನೆ. ಸದ್ಯ ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ, ನವಿಲು ಸಹ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ. ಈ ಮೂಲಕ ಸನಾತನ ಧರ್ಮದ ಬಗ್ಗೆ ಇವರು ದಾರಿ ತಪ್ಪಿಸಲು ತರುತ್ತಿದ್ದಾರೆ ಅಂತಾ ಹೇಳುವ ಮೂಲಕ ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಕೆ ಮಾಡಿದ್ದಾರೆ. ಸ್ಟಾಲೀನ್ ಮಾತಾಡಿದ್ದು ತಪ್ಪೇನಿದೆ. ಅಸ್ಪೃಶ್ಯತೆ ಹೋಗಬೇಕು ಇಲ್ಲವೋ? ಅವರ ಹೇಳಿಕೆಯನ್ನ ತಿರುಚಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಇನ್ನು, ನನ್ನಂತೆ ಇತರೆ ನಟರು ಯಾಕೆ ಮಾತನಾಡಲ್ಲ ಎಂಬ ಪ್ರಶ್ನೆಗೂ ಸಹ ಪ್ರಕಾಶ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಚೂಡಿ ಹಾಕಿಕೊಂಡಿರುವುದು ನನಗೆ ಗೊತ್ತಿಲ್ಲ. ಹೀಗಾಗಿ, ಮಾತನಾಡಲ್ಲ ಅಂತಾ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.