ಬೆಂಗಳೂರು ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ಬಳಿಕ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.
ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಸೆರೆ ಸಿಕ್ಕ ಶಂಕಿತರ ಉಗ್ರರರಿಗೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ., ಅವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಎಂದು ತರಬೇತಿ ನೀಡಿ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ ಸಿದ್ಧ ಮಾಡಿಕೊಂಡಿದ್ದ ಎಂದು ತನಖೆಯಿಂದ ತಿಳಿದು ಬಂದಿದೆ.