ದಾವಣಗೆರೆ : ಸರ್ಕಾರದ ಎಲ್ಲಾ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು, ಎಲ್ಲಾ ಜನಾಂಗದವರಿಗೂ ಈ ಯೋಜನೆಯ ಲಾಭಸಿಕ್ಕಗ ಸಮಾಜದ ಅಭಿವೃದ್ದಿಯಾಗುತ್ತದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಹೇಳಿದರು.
ಬುಧವಾರ (27) ರಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜರುಗಿದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಯವರ 15-ಅಂಶ ಕಾರ್ಯಕ್ರಮಗಳ ಪ್ರಸಕ್ತ ಸಾಲಿನ ಏಪ್ರಿಲ್-2023 ರಿಂದ ಆಗಸ್ಟ್-2023ರವರೆಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿರು ಎಲ್ಲಾ ಇಲಾಖೆಯ ಅಧಿಕಾರಿಗಳು ಅಲ್ಪಸಂಖ್ಯಾತರ ವರ್ಗದವರಿಗೆ ಮೀಸಲಿರಿಸಿರುವ ಸೌಲಭ್ಯ, ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ.ವಿ.ಮಠದ ಅವರು 15 ಅಂಶಗಳ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ.ಎ.ಎಲ್, ಅಲ್ಪಸಂಖ್ಯಾತರ ನಾಮನಿರ್ದೇಶಿತ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.