ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ.ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸುವ ವಿಶ್ವಾಸವಿದೆ ಎಮದರು. ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ. ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಈ ಎಚ್ಚರಿಕೆಯನ್ನು ಸರ್ಕಾರಕ್ಕೆ ಕೊಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ವಲಸಿಗ ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.