‘ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ’- ಸಿಎಂ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ.ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

Advertisement

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement