ಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್ (Union Bank of India)ದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ 10 ರಾಜ್ಯಗಳ ಯೂನಿಯನ್ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಖಾಲಿ ಇರುವ ಒಟ್ಟು ಹುದ್ದೆಗಳು: 1,500. ಈ ಪೈಕಿ ಕರ್ನಾಟಕ ರಾಜ್ಯಕ್ಕೆ 300 ಹುದ್ದೆಗಳನ್ನು ಮೀಸಲಿಡಲಾಗಿದೆ. ಯಾವುದೇ ವಿಷಯದಲ್ಲಿ ಪದವಿಯ ಜೊತೆ ಕನ್ನಡ ಓದಲು ಬರೆಯಲು ಬರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶೈಕ್ಷಣಿಕ ಅರ್ಹತೆ: Local Bank Officer’s Recruitment 2024 (Union Bank of India) – ಯೂನಿಯನ್ ಬ್ಯಾಂಕಿನ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಒಂದು ವಿಷಯದಲ್ಲಿ ಕನಿಷ್ಟ ಪದವಿ ಪಡೆದಿರಬೇಕು. ವಯೋಮಿತಿ: ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗೆ ಇರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ ಹಾಗೂ ವಿವಿಧ ಸೌಲಭ್ಯಗಳು : ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480ರೂ. ಯಿಂದ 85,920ರೂ. ವರೆಗೆ ವೇತನ ಸಿಗುತ್ತದೆ ಹಾಗೂ ಅದರ ಜೊತೆಗೆ ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ವೆಚ್ಚ ಮರುಪಾವತಿ, ವಿಶೇಷ ಭತ್ಯೆ, ತುಟ್ಟಿ ಭತ್ಯೆ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಶುಲ್ಕದ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 850/- ಪಾವತಿಸಬೇಕು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 175/- ಪಾವತಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 13, 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಈ ಕೆಳಗಿನ ಲಿಂಕ್ ಬಳಸಬಹುದು: https://bit.ly/40gwDiQ