‘ಸರ್ಕಾರ ಕೆಡವಲು ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್’- ಗಾಣಿಗ ರವಿ

WhatsApp
Telegram
Facebook
Twitter
LinkedIn

ಮಂಡ್ಯ : ಸರ್ಕಾರ ಕೆಡವಲು ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಾಣಿಗ ರವಿಕುಮಾರ್ ಮತ್ತೆ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೆಡವಲು ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ. ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದು ಹೇಳಿದ್ದಾರೆ.

ನಮ್ಮ ಶಾಸಕರನ್ನ ಎಲ್ಲೆಲ್ಲಿ ಸಂಪರ್ಕಿಸಿದ್ದರು? ಏನೇನು ಆಫರ್ ಮಾಡಿದ್ದರು? ಎನ್ನುವುದನ್ನು ಶೀಘ್ರದಲ್ಲೇ ಮಾಧ್ಯಮಗಳ ಮೂಲಕ ದಾಖಲೆ ಬಿಡುಗಡೆ ಮಾಡುತ್ತೇವೆ. ಸರ್ಕಾರ ಕೆಡವಲು ಪ್ರಯತ್ನಿಸದವರು ಈ ಬಗ್ಗೆ ತನಿಖೆ ಮಾಡಿಸಿ ಎನ್ನುತ್ತಾರೆ. ಪ್ರಯತ್ನದಲ್ಲಿರುವವರು ಯಾರು ತನಿಖೆ ಮಾಡಿಸಿ ಎನ್ನುವುದಿಲ್ಲ. ನಮ್ಮ ಶಾಸಕರರು ಬಿಜೆಪಿ ಆಮಿಷಗಳಿಗೆ ಬಲಿಯಾಗಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ಸರ್ಕಾರವೂ ಸ್ಥಿರವಾಗಿದೆ ಎಂದರು.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon