ಮುಂಬೈ :ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.
ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹ 5 ಕೋಟಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗಿರುತ್ತದೆ ಎಂದು ಕಳುಹಿಸಿದವರು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ (66) ಅವರನ್ನು ಅಕ್ಟೋಬರ್ 12 ರಂದು ಮುಂಬೈನ ಉನ್ನತ ಮಟ್ಟದ ಬಾಂದ್ರಾದಲ್ಲಿರುವ ಅವರ ಶಾಸಕ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು.