ಬೆಂಗಳೂರು: ವೃಕ್ಷಮಾತೆ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದೆ. ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ತಿಮ್ಮಕ್ಕ ಅವರ ದತ್ತುಪುತ್ರ ವನಸಿರಿ ಅವರು ವಿಡಿಯೋ ಮೂಲಕ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ನೀಡಿ ಸುಳ್ಳು ಸುದ್ದಿ ಹರಡದಂತೆ ವಿನಂತಿ ಮಾಡಿಕೊಂಡಿದ್ದಾರೆ.