ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
2022ರ ಏ.14 ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ, ಸುರ್ಜೆವಾಲಾ ಸೇರಿದಂತೆ ಹಲವು ನಾಯಕರಿಗೆ ದಂಡ ವಿಧಿಸಲಾಗಿತ್ತು.
ಈ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್ ಕ್ರಮ ಪ್ರಶ್ನಿಸಿ ಸಿಎಂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.