ಸಿಎಂ ಮಮತಾ ಮನೆಗೆ ನುಗ್ಗಲು ಯತ್ನಿಸಿದ ಬಂದೂಕುಧಾರಿಯ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿವಾಸಕ್ಕೆ ನುಗ್ಗಲು ಯತ್ನಿಸಿದ ಶಸ್ತ್ರಸಜ್ಜಿತ ಬಂದೂಕುಧಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶೇಖ್ ನೂರ್ ಆಲಂ ಎಂದು ಗುರುತಿಸಲಾಗಿದೆ.

ಈತನ ಬಳಿ ಬಂದೂಕು ಮತ್ತು ಹರಿತ ಆಯುಧಗಳು, ವಿವಿಧ ಏಜೆನ್ಸಿಗಳ ಹಲವಾರು ಗುರುತಿನ ಚೀಟಿಗಳು ಪತ್ತೆಯಾಗಿವೆ. ಈ ವ್ಯಕ್ತಿ ಮಮತಾ ಬ್ಯಾನರ್ಜಿಯ ಕಾಲಿಘಾಟ್ ನಿವಾಸದ ಸಂಕೀರ್ಣಕ್ಕೆ ಪೊಲೀಸರಂತೆ ಪೋಸ್‌ ಕೊಟ್ಟು ಪ್ರವೇಶಿಸಿದ್ದ. ಇದರಿಂದ ಭಾರೀ ಅನಾಹುತ ತಪ್ಪಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ವರದಿಯಾಗಿದೆ

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement