ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ಎದುರಾದ ಬೆನ್ನಲ್ಲೇ ರಾಜ್ಯ ರಾಜಕಾರಣದ ದಿಕ್ಕೂ ಸಹ ಬದಲಾವಣೆ ಆಗಲಿದ್ಯಾ ಎಂಬ ಚರ್ಚೆ ಶುರುವಾಗಿದೆ, ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದುಕೂತಿವೆ ಇನ್ನೊಂದು ಕಡೆ ಕಾನೂನಿನ ಕುಣಿಕೆಯಲ್ಲಿ ಸಿದ್ದರಾಮಯ್ಯ ಸಿಲುಕಿಕೊಂಡಿದ್ದಾರೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ಕಾನೂನು ಹೋರಾಟವನ್ನ ಸಿಎಂ ಸಿದ್ದರಾಮಯ್ಯ ಮುಂದುವರೆಸುವ ಚಿಂತನೆಯಲ್ಲಿದ್ದಾರೆ. ಇದ್ರ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಒಳಗೊಳಗಯೇ ಒಂದಿಷ್ಟು ಬೆಳವಣಿಗೆಗಳು ನಡೆಯುತ್ತಿವೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ದೆಹಲಿಗೆ ಭೇಟಿಗೂ ಮುನ್ನ ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ ಪರಮೇಶ್ವರ್ ಮತ್ತು ಹೆಚ್ ಸಿ ಮಹದೇವಪ್ಪ ಜೊತೆ ರಹಸ್ಯ ಮಾತುಕತೆ ನಡೆಸಿದ್ದ ಜಾರಕಿಹೊಳಿ. ಖರ್ಗೆ ಭೇಟಿ ವೇಳೆ ಪರಮೇಶ್ವರ್ ಮತ್ತು ಮಹಾದೇವಪ್ಪ ಜೊತೆಯ ಚರ್ಚೆಯ ಸಾರಾಂಶವನ್ನ ಖರ್ಗೆ ಗಮನಕ್ಕೆ ಜಾರಕಿಹೊಳಿ ತಂದಿದ್ದಾರೆ. ಮುಂದಿನ ಬೆಳವಣಿಗೆ ಮತ್ತು ಸಮುದಾಯದ ಬಗ್ಗೆ ಖರ್ಗೆ ಜೊತೆ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿಗೆ ಸಿಎಂ ಸ್ಥಾನ ಸಿಗಬೇಕೆಂಬ ಬಗ್ಗೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆಯನ್ನ ಜಾರಕಿಹೊಳಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
