ಮೈಸೂರು: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ 1860ರ IPC ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.!


































