ಬೆಂಗಳೂರು: ಮುಡಾ ಪ್ರಕರಣ ಇನ್ನೂ ಕೋರ್ಟ್ ನಲ್ಲಿರುವಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಮೈಸೂರಿನ ಪಿ.ಎಸ್. ನಟರಾಜ್ ಎಂಬುವರು ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಆಗಸ್ಟ್ 27ರಂದು ದೂರು ನೀಡಿರುವ ನಟರಾಜ್, ದೂರಿನಲ್ಲಿ ಮಾನ್ಯ ಮುಖ್ಯಮಂತ್ರಿಯವರ ಮೌಖಿಕ ನಿರ್ದೇಶನದ ಅನ್ವಯ ಮುಖ್ಯಮಂತ್ರಿಗಳ ಮತಕ್ಷೇತ್ರ ವರುಣಾದಲ್ಲಿ ಮತ್ತು ಶ್ರೀರಂಗಪಟ್ಟ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿ, ಈ ಕಾಮಗಾರಿ ಕರ್ನಾಟಕ ನಗರಾಭಿವೃದ್ಧಿ ವಿಧೇಯಕ, 1987ರ ಸೆಕ್ಷನ್ 15 ಮತ್ತು 25ರ ವಿರುದ್ಧ ಕಾಮಗಾರಿ ಎಂದು ದೂರಿನಲ್ಲಿ ನಾಟರಾಜ್ ಉಲ್ಲೇಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 387 ಕೋಟಿಗಳ ಕಾಮಗಾರಿಗಳನ್ನು ನಿಯಮಬಾಹಿರವಾಗಿ ಕೈಗೊಳ್ಳಲಾಗಿದೆ.ಪ್ರಾಧಿಕಾರದಲ್ಲಿ ಹಣವಿಲ್ಲದಿದ್ದರೂ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಮಗಾರಿ ಕೈಗೊಳ್ಳಲಾಗಿದೆ ಇದರಿಂದಾಗಿ ಅಧಿಕಾರ ದುರುಪಯೋಗವಾಗಿದ್ದು, ಈ ಬಗ್ಗೆ ಸಿ.ಬಿ.ಐ ತನಿಖೆ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಟರಾಜ್ ದೂರಿನಲ್ಲಿ ಮನವಿ ಮಾಡಿದ್ದಾರೆ. ನಟರಾಜ್ ಎಂಬವರು ಸಿಎಂ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಿದ್ದರ ಬಗ್ಗೆ ಸೆಪ್ಟೆಂಬರ್ 5 ರಂದು ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಮೈಸೂರಿನ ಪಿ.ಎಸ್. ನಟರಾಜ್ ಸಲ್ಲಿಸಿರುವ ದೂರಿನಲ್ಲಿರುವ ಅಂಶಗಳು ಬಹಳ ಗುರುತರವಾಗಿದೆ. ಈ ಬಗ್ಗೆ ಪರಿಶೀಲಿಸಿ ದಾಖಲೆಗಳ ಸಮೇತ ಶೀಘ್ರವಾಗಿ ವಿವರವಾದ ವರದಿ ಸಲ್ಲಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯಪಾಲರು ವರದಿ ಸಲ್ಲಿಸಿ ಎಂಬ ಸೂಚನೆ ಹಿನ್ನೆಲೆಯಲ್ಲಿ ರಾಜ್ಯಪಾಲರಿಂದ ಸ್ವೀಕೃತ ದಾಖಲೆಗಳನ್ನು ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ ವರದಿ ಕೇಳಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್. ಈ ಮೂಲಕ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೆ ಸಂಘರ್ಷ ಏರ್ಪಾಡಲಿದ್ಯಾ ಎಂಬ ಪ್ರಶ್ನೆ ಶುರುವಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ