ಮೈಸೂರು: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್‌ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.
