ಮೈಸೂರು : ಮೈಸೂರಿನಲ್ಲಿ ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎನ್ನುವ ಮೂಲಕ ಸಿಎಂ ಸ್ಥಾನ ಬಿಟ್ಟು ಕೊಡುವ ಬಗ್ಗೆ ಮೌನ ಮುರಿದಿದ್ದಾರೆ. ಎರಡು ವರ್ಷದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕಾಗುತ್ತದೆ ಎನ್ನುವ ಊಹಾಪೋಹಗಳ ಬಗ್ಗೆ ಸಿಎಂ ಪ್ರತಿಕ್ರಿಯೆ ಪುಷ್ಠಿ ನೀಡಿದ್ದಂತಾಗಿದೆ.