ಗಂಗಟೋಕ್ : ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ. ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.