ನವದೆಹಲಿ: ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ 2022ರಲ್ಲಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಕಾಂಗ್ರೆಸ್ ನಾಯಕರ ಮನವಿಯನ್ನು ಆಲಿಸುವ ಸಾಧ್ಯತೆಯಿದೆ.
ಸಿದ್ದರಾಮಯ್ಯ , ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ , ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂಆದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರಿಗೆ ತಲಾ ₹ 10,000 ದಂಡ ವಿಧಿಸಿದ್ದ ಹೈಕೋರ್ಟ್, ಎಲ್ಲರೂಜನಪ್ರ ತಿನಿಧಿಗಳ ನ್ಯಾ ಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು .
ಸಿದ್ದರಾಮಯ್ಯ ಅವರ ವಕೀಲ ರಾಜೇಶ್ ಗುಲಾಬ್ ಇನಾಮದಾರ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿ ಸಿದ್ದಾರೆ. ದಕ್ಷಿಣ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿತ್ತು.ಈಶ್ವರಪ್ಪ ತಮ್ಮ ಗ್ರಾಮದ ಸಾರ್ವಜನಿಕ ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು.