ದಾವಣಗರೆ: ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಸ್ವಾಮೀಜಿಯವರನ್ನು ಪೀಠದಿಂದ ಕೆಳಗಿಳಿಸಲು ಅಖಿಲ ಭಾರತ ವೀರಶೈವ ಮಹಾಸಭೆಯಲ್ಲಿ ನಿರ್ಧರಿಸಲಾಗಿದೆ.
ಆಗಸ್ಟ್ 18ರಂದು ಮಠಕ್ಕೆ ಹೋಗಲು ನಿರ್ಧಾರ ಮಾಡಲಾಗಿದೆ. ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಹತ್ತು ವರ್ಷದ ಹಿಂದೆ ಸಿರಿಗೆರೆ ಸ್ವಾಮೀಜಿ ಪದತ್ಯಾಗ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಭಕ್ತರ ಆಗ್ರಹದಿಂದ ತ್ಯಾಗ ಮಾಡಲಿಲ್ಲ. ನಂತರ ಮಠದ ಟ್ರಸ್ಟ್‌ನಲ್ಲಿ ತಿದ್ದುಪಡಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
				
															
                    
                    
                    
                    
































