ನವದೆಹಲಿ: ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐ ಹಾಗೂ ಇ.ಡಿ ಗೆ ಶುಕ್ರವಾರ ನೋಟಿಸ್ ಜಾರಿ ಮಾಡಲಾಗಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿ ಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಏ. 30ರಂದು ಸಿಸೋಡಿಯಾ ಅವರಿಗೆ ಜಾಮೀನು ಮಂಜೂರು ಮಾಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಸೋಡಿಯಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸ್ವರ್ಣಕಾಂತ ಶರ್ಮಾ ಅವರ ಪೀಠ, ಸಿಬಿಐ ಹಾಗೂ ಇ.ಡಿಗೆ ನೋಟಿಸ್ ಜಾರಿ ಮಾಡಿತ್ತು. ಮೇ 8ರಂದು ಪ್ರಕರಣವನ್ನು ವಿಚಾರಣೆ ನಡೆಸುವಂತೆ ತಿಳಿಸಿದೆ.