ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ನೀಡಿದೆ.
ಉಚ್ಚಾಟನೆ ಮತ್ತು ಅಧ್ಯಕ್ಷ ಹುದ್ದೆಗೆ ತಾತ್ಕಾಲಿಕವಾಗಿ ಹೆಚ್.ಡಿ.ಕೆ ಅವರನ್ನು ನೇಮಿಸಲಾಗಿದ್ದು, ಈ ಕ್ರಮವನ್ನು ಪ್ರಶ್ನಿಸಿ ಸಿ.ಎಂ.ಇಬ್ರಾಹಿಂ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಈ ದಾವೆ ತಿರಸ್ಕಾರವಾಗಿತ್ತು.
ಈ ಆದೇಶ ರದ್ದು ಕೋರಿ ಸಿ.ಎಂ.ಇಬ್ರಾಹಿಂ ಹೈಕೋರ್ಟ್ನಲ್ಲಿ ನಿಯಮಿತ ಮೊದಲ ಮೇಲ್ಮನವಿ (ಆರ್ಎಫ್ಎ) ಸಲ್ಲಿಸಿದ್ದರು. ಇದೀಗ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಜೊತೆಗೆ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಲಾಗಿದೆ.