ಸುಳ್ಯ: ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿಯ ಬಂಧನ

ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

Advertisement

ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement