ಚಿತ್ರದುರ್ಗ : 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ–ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿದೆ.
ಜಿಲ್ಲೆಯ ಎಲ್ಲಾ ತಾಲ್ಲೂಕಿನ ನೀರಾವರಿ ಸೌಲಭ್ಯವುಳ್ಳ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ (ಅಡಿಕೆ ಬೆಳೆ ಹೊರತುಪಡಿಸಿ) ಸಾಮಾನ್ಯ ವರ್ಗದ ರೈತರಿಗೆ ಶೇ.75 ರಂತೆ ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರಂತೆ ಸಹಾಯಧನ ಸೌಲಭ್ಯವಿರುತ್ತದೆ. ಜಿಲ್ಲೆಯ ಆಸಕ್ತಿಯುಳ್ಳ ರೈತರು ಅವಕಾಶ ಸದ್ಭಳಕೆ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹೋಬಳಿ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ತೋಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.