ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರೆಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ನೀಡಲಾಗಿದೆ. ಇದರಿಂದ ಖಾಸಗಿ ವಾಹನ ಸಂಘಗಳ ಒಕ್ಕೂಟದಿಂದ ಸೆಪ್ಟೆಂಬರ್ 11 ರಂದು ಬೆಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.
ಬಂದ್ ಹಿನ್ನಲೆ ಇಂದು 32 ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಚಾಲಕರು ಬೆಂಗಳೂರು ಬಂದ್ ಪೋಸ್ಟರ್ನ್ನು ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆಟೋ, ಟ್ಯಾಕ್ಸಿ ಹಾಗೂ ಕ್ಯಾಬ್ಗಳಿಗೆ ಕಪ್ಪು ಬಾವುಟ ಕಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಖಾಸಗಿ ಬಸ್ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ, ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು,ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ ಸೇರಿದಂತೆ 7 ಬೇಡಿಕೆ ಮುಂದಿಟ್ಟು ಬಂದ್‌ಗೆ ಕರೆ ನೀಡಲಾಗಿದೆ.ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದಲೇ ಬಂದ್ ಶುರುವಾಗಲಿದೆ ಎಂದು ಒಕ್ಕೂಟ ತಿಳಿಸಿದೆ.