ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ.!

WhatsApp
Telegram
Facebook
Twitter
LinkedIn

 

  ದಾವಣಗೆರೆ; ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇದ್ದ ಹುದ್ದೆಗಳಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯ, ದಾವಣಗೆರೆ ಇಲ್ಲಿಗೆ ನಡೆಸಲಾಗುತ್ತದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಆಯಾ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಆಯಾ ಪಂಚಾಯಿತಿವಾರು ಅಭ್ಯರ್ಥಿಗಳಿಲ್ಲದಿದ್ದಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿನ ಪಂಚಾಯಿತಿ ವ್ಯಾಪ್ತಿಗಳ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ಚನ್ನಗಿರಿ ತಾ; ಕಬ್ಬಳ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾರೂ ಅರ್ಜಿ ಸಲ್ಲಿಸದ ಕಾರಣ ಇತರೆ ಪಂಚಾಯಿತಿ ಅಭ್ಯರ್ಥಿಗಳನ್ನು ಪರಿಗಣಿಸಲು ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ.  ವೆಬ್‍ಸೈಟ್  davanagere.nic.in     ನಲ್ಲಿ ಪ್ರಕಟಿಸಲಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಪರಶೀಲನೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon