ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್ ನ ಅಹಮದಾಬಾದ್ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ ಮಂತ್ರಿಗೆ ಚಹಾ ತಂದು ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಮೋದಿ ಅವರು ಟ್ವಿಟರ್ (ಎಕ್ಸ್) ನಲ್ಲಿ ಆಸಕ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದು, ಇದರಲ್ಲಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರದರ್ಶನದಲ್ಲಿ ವಿವಿಧ ರೋಬೋಟ್ ಸ್ಟಾಲ್‌ಗಳಲ್ಲಿ ಹಲವಾರು ರೋಬೋಟಿಕ್ ಕ್ರಿಯೆಗಳನ್ನು ವೀಕ್ಷಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ಮತ್ತು ಸಿಎಂಗೆ ರೋಬೋಟ್ ಚಹಾವನ್ನು ನೀಡಿದೆ.
ನೈಸರ್ಗಿಕ ವಿಕೋಪಗಳು ಅಥವಾ ಅಗ್ನಿ ಅವಘಡಗಳ ಸಂದರ್ಭದಲ್ಲಿ ಮಾನವರಿಗೆ ರೋಬೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಪ್ರಧಾನಿ ಮೋದಿ ಅವರು ನೋಡಿದ್ದಾರೆಂದು ಕ್ಲಿಪ್ ತೋರಿಸಿದೆ.
ರೋಬೋಟ್ ಇಂಜಿನಿಯರ್‌ಗಳು ಪಿಎಂ ಮೋದಿಯವರಿಗೆ ರೋಬೋಟ್‌ಗಳು ಹೇಗೆ ಜೀವನದ ವಿವಿಧ ಹಂತಗಳಲ್ಲಿ ಶಕ್ತರಾಗಿ ದೊಡ್ಡ ಪಾತ್ರವನ್ನು ವಹಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ.
ರೊಬೊಟಿಕ್ಸ್ ನೊಂದಿಗೆ ಭವಿಷ್ಯದ ಅಂತ್ಯವಿಲ್ಲದ ಸಾಧ್ಯತೆಗಳನ್ನು ಅನ್ವೇಷಿಸುವುದು! ಎಂದು ಟ್ವಿಟರ್ (ಎಕ್ಸ್) ಪೋಸ್ಟ್ ನಲ್ಲಿ ಪಿಎಂ ಮೋದಿ ಬರೆದುಕೊಂಡಿದ್ದಾರೆ.